nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    ಸ್ಪೆಷಲ್ ನ್ಯೂಸ್ June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    By adminJune 22, 2026No Comments2 Mins Read
    chandragiri.jpg

    ಬೆಂಗಳೂರು: ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ, ತೀವ್ರ ಕುತೂಹಲ ಕೆರಳಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಹೊಸಕೋಟೆ, ವೈಟ್ ಫೀಲ್ಡ್ ಹಾಗೂ ಬೆಳ್ಳಿಕೆರೆ ಸುತ್ತಮುತ್ತಲಿನ ಸುಂದರ ಮತ್ತು ರಹಸ್ಯಮಯ ಪರಿಸರದಲ್ಲಿ ಸಿನಿಮಾದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ಈ ಚಿತ್ರದ ಕಥಾಹಂದರವು ವಿಚಿತ್ರ ಚಂದ್ರಗಿರಿ ಎಂಬ ಊರಿನ ಸುತ್ತ ಸುತ್ತುತ್ತದೆ, ಅಲ್ಲಿ ಪ್ರತಿ ಅಮಾವಾಸ್ಯೆಯಂದು ನಿಗೂಢ ಆತ್ಮಹತ್ಯೆಗಳು ನಡೆಯುತ್ತಿರುತ್ತವೆ. ಈ ನಿರಂತರ ಸಾವಿನ ರಹಸ್ಯವನ್ನು ಭೇದಿಸಲು ನಾಲ್ಕು ಜನ ಧೈರ್ಯಶಾಲಿಗಳು ಆ ಊರಿಗೆ ಬರುತ್ತಾರೆ. ಅಲ್ಲಿ ಅವರಿಗೆ ಎದುರಾಗುವ ಅನಿರೀಕ್ಷಿತ ಸವಾಲುಗಳು, ಭಯಾನಕ ಸಮಸ್ಯೆಗಳು ಹಾಗೂ ಅವುಗಳಿಂದ ಅವರು ಹೇಗೆ ರೋಚಕವಾಗಿ ಪಾರಾಗುತ್ತಾರೆ ಎಂಬ ಕೌತುಕದ ಹೂರಣವನ್ನು ಈ ಚಿತ್ರ ಒಳಗೊಂಡಿದೆ. ಚಿತ್ರಕ್ಕೆ ರಾಜೀವ್ ಕೃಷ್ಣ ಗಾಂಧಿ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

    ಚಿತ್ರದಲ್ಲಿ ಸ್ಯಾಂಡಲ್‌ವುಡ್‌ ನ ಪ್ರಮುಖ ನಟರ ದಂಡೇ ಇದ್ದು, ಉಗ್ರಮ್ ರವಿ, ಶೋಭರಾಜ್, ಶಂಖನಾದ ಆಂಜಿನಪ್ಪ, ಅನ್ನಪೂರ್ಣ, ಬೆಂಗಳೂರು ಮನೋ, ಮರಿಸ್ವಾಮಿ, ಪಂಚಾಕ್ಷರಯ್ಯ, ವೀರಧನುಷ್, ಕಿಶೋರ್ ಕಾಸರಗೋಡು, ವೈಭವಿ ನಾಗರಾಜ್, ಬಲರಾಂ ಪಾಚಾಳ್, ರಂಜನ್ ಶೆಟ್ಟಿ, ಭಕ್ತರಹಳ್ಳಿ ರವಿ, ಸ್ವಸ್ತಿಕ್ ಶಂಕರ್, ಸೆವನ್ ರಾಜ್, ಯಶಸ್, ರೂಪಶ್ರೀ ಮತ್ತು ಕಿರಣ್ ಕುಮಾರ್ ಗಟ್ಟಿಗನಬ್ಬೆ ಮುಂತಾದವರು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ತಾಂತ್ರಿಕ ವರ್ಗದಲ್ಲೂ ನುರಿತ ತಜ್ಞರಿದ್ದು, ಎಂ. ಎಲ್. ರಾಜ ಅವರ ಹಿನ್ನೆಲೆ ಸಂಗೀತ, ಗುರುದತ್ ಮುಸರಿ ಅವರ ಛಾಯಾಗ್ರಹಣ ಹಾಗೂ ಡಿ. ಮಲ್ಲಿ ಅವರ ಸಂಕಲನ ಚಿತ್ರಕ್ಕಿದೆ. ಇನ್ನುಳಿದಂತೆ ವೈಲೆಂಟ್ ವೇಲು ಅವರ ಸಾಹಸ ನಿರ್ದೇಶನ, ಮೋಹನ್ ಕುಮಾರ್ ಅವರ ಪ್ರಸಾಧನ, ಇಂದ್ರಕುಮಾರ್ ಅವರ ಸ್ಥಿರಚಿತ್ರಣ ಮತ್ತು ಮಲ್ಲಿಕಾರ್ಜುನ ಹಾಗೂ ಎಂ. ಜಿ. ಕಲ್ಲೇಶ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ವಿ.ಎಂ.ಎಸ್. ಗೋಪಿ ಪತ್ರಿಕಾ ಸಂಪರ್ಕದ ಜವಾಬ್ದಾರಿ ನಿಭಾಯಿಸಿದ್ದಾರೆ.

    ಮೊದಲ ಹಂತದ ಯಶಸ್ಸಿನ ಬಳಿಕ ಚಿತ್ರತಂಡ ಈಗ ಎರಡನೇ ಹಂತದ ಚಿತ್ರೀಕರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರಕೃತಿ ಸೌಂದರ್ಯದ ನಡುವೆ ಕಥೆಯನ್ನು ಮತ್ತಷ್ಟು ರೋಚಕವಾಗಿ ಸೆರೆಹಿಡಿಯಲು ಮುಂದಿನ ಶೂಟಿಂಗ್‌ ಅನ್ನು ಸಕಲೇಶಪುರ ಮತ್ತು ಚಿಕ್ಕಮಗಳೂರಿನ ಸುತ್ತಮುತ್ತಲಿನ ಹಸಿರು ಮಡಿಲಿನಲ್ಲಿ ನಡೆಸಲು ಚಿತ್ರತಂಡ ಪ್ಲಾನ್ ಮಾಡಿದೆ.

    ವರದಿ: ವಿ.ಎಂ.ಎಸ್. ಗೋಪಿ, ಬೆಂಗಳೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.