nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ
    ತುಮಕೂರು February 6, 2025

    ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

    By adminFebruary 6, 2025No Comments2 Mins Read
    photography competition

    ತುಮಕೂರು:  ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

    ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000 ರೂ., 25,000 ರೂ. ಹಾಗೂ 15,000 ರೂ.ಗಳ ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಅಕಾಡೆಮಿ ವತಿಯಿಂದ ಮಾರ್ಚ್ ತಿಂಗಳಲ್ಲಿ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

     

    ಸ್ಪರ್ಧೆಯ ಷರತ್ತುಗಳು: 

    • ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ 1–1–2024 ರಿಂದ 31–1–2025ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
    • ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
    • ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
    • ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‍ಗಳು ಇರಬಾರದು.
    • ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನು JPEG format ನಲ್ಲಿ ಮಾತ್ರ ಸಲ್ಲಿಸಬೇಕು.
    • ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು 20”x 30” ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್‍ಗಳು 20”x 30” ಅಳತೆಯ, 300 ಆPI ನಲ್ಲಿದ್ದು ಕನಿಷ್ಠ 5 MB ಗಾತ್ರದಲ್ಲಿರಬೇಕು.
    • ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
    • ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
    • ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್‍ ಸೈಟ್‍ ನಲ್ಲಿಇರುವ ನಿಗಧಿತ ಅರ್ಜಿಯನ್ನು Down load ಮಾಡಿಕೊಂಡು ಭರ್ತಿ ಮಾಡಿ, ತಮ್ಮ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‍ಗಳನ್ನು photo.karnatakamediaacademy@gmail.com ಇ–ಮೇಲ್ ವಿಳಾಸಕ್ಕೆ ದಿನಾಂಕ: 15–02–2025 ರಂದು ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
    • ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು, ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
    • ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನು ನೀಡಲಾಗುವುದು.
    • ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448227768 ಹಾಗೂ 9449245980ಯನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.