ಏಕದಿನ ವಿಶ್ವಕಪ್ನ 5ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಡೆಂಗಿ ಜ್ವರದಿಂದ ಬಳಲುತ್ತಿರುವ ಶುಭ್ ಮನ್ ಗಿಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ 149 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 56 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 83 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಇಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಹೊಂದಿರುವುದು ಸ್ಪಷ್ಟ. ಇನ್ನು ಕೊನೆಯ 6 ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.


