ಬೆಂಗಳೂರು: ನಗರದಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಐವರನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುಜಮಿಲ್, ಅಬ್ದುಲ್ ಅಜೀಜ್, ಮಹಮ್ಮದ್ ಅಪ್ಟಲ್, ಅಬ್ದುಲ್ ಸಮೀರ್, ಮುತಾಸಿದ್ದಿಕ್ ಬಂಧಿತ ಆರೋಪಿಗಳು.
ಬಂಧಿತರಿಂದ 26 ಲಕ್ಷ ಮೌಲ್ಯದ ಇ-ಸಿಗರೇಟ್ ಉತ್ಪನ್ನ, ವಿದೇಶಿ ಸಿಗರೇಟ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಅಕ್ರಮವಾಗಿ ಇ-ಸಿಗರೇಟ್ ದಾಸ್ತಾನು ಮಾಡಿ ಮಾರಾಟ ಮಾಡ್ತಿದ್ದರು. ಕೊತ್ತನೂರು ಪೊಲೀಸರು ಈ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.


