ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಶಾಸಕ ತನ್ವೀರ್ ಸೇಠ್ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶಾಸಕ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರನ್ನ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್.ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296