ತುಮಕೂರು: ಶಿಶು ಮಾರಾಟ ಆರೋಪದ ಹಿನ್ನೆಲೆಯಲ್ಲಿ ಮಗುವಿನ ತಂದೆ– ತಾಯಿ ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ನಗರದಲ್ಲಿ ನಡೆದಿದೆ.
ಮಗುವಿನ ತಾಯಿ ಮೊನಿಷಾ (21), ತಂದೆ ಶ್ರೀನಂದ (24), ಅಂಗನವಾಡಿ ಕಾರ್ಯಕರ್ತೆ ಜ್ಯೋತಿ (45), ಮಗುವನ್ನ ಖರೀದಿಸಿದ್ದ ಮುಬಾರಕ್ ಪಾಷ (36) ಹಾಗೂ ಮಗುವಿನ ತಂದೆಯ ಸ್ನೇಹಿತೆ ಜ್ಯೋತಿ (32) ಬಂಧಿತ ಆರೋಪಿಗಳು ಆಗಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ಮೂಲದ ಶ್ರೀನಂದ ಮತ್ತು ಮೊನಿಷಾ ಇಬ್ಬರು ಅವಿವಾಹಿತರಾಗಿದ್ದರು. ಫೆಬ್ರವರಿ 20 ರಂದು ಮೊನಿಷಾಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಇನ್ನು ಮದುವೆಯಾಗದ ಕಾರಣ ಮಗುವನ್ನ ಮನೆಗೆ ಕರೆದೊಯ್ಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಗುವನ್ನ ಮಾರಾಟ ಮಾಡಿದ್ದರು.
ಅಂಗನವಾಡಿ ಆಶಾ ಕಾರ್ಯಕರ್ತೆ ಜ್ಯೋತಿ ಮೂಲಕ ಮಗು ಮಾರಾಟ ಮಾಡಿದ್ದರು. ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಜ್ಯೋತಿ ಮೂಲಕ ಮಗುಗವನ್ನು ಕೊತ್ತಗೆರೆ ಗ್ರಾಮದ ಮುಬಾರಕ್ ಪಾಷ ಎಂಬುವರಿಗೆ 60 ಸಾವಿರಕ್ಕೆ ಮಗು ಮಾರಾಟ ಮಾಡಲಾಗಿತ್ತು.
ಘಟನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಯಿಂದ ದೂರು ದಾಖಲಿಸಿಕೊಂಡ ಕುಣಿಗಲ್ ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕುಣಿಗಲ್ ನಲ್ಲಿ ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಅವರು ಮಾಗಡಿ ಮೂಲದ ಮೊನಿಷಾ ಎಂಬುವರು ಫೆಬ್ರವರಿ 20 ರಂದು ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ಹೊಟ್ಟೆನೋವು ಅಂತ ದಾಖಲಾಗಿದ್ರು. ಅದೇ ದಿನ ಗಂಡು ಮಗುವಿಗೆ ಜನ್ಮ ನೀಡಿರ್ತಾರೆ. ಈ ವೇಳೆಯಲ್ಲಿ ಅವರ ಅತ್ತೆ ಜೊತೆ ಅತ್ತೆ ಜ್ಯೋತಿ ಕೂಡ ಇದ್ದರು ಎಂದಿದ್ದಾರೆ.
ಇದಾದ ನಂತರ ಫೆಬ್ರವರಿ 22 ನೇ ತಾರೀಖು ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಮೂಲಕ ಮಗುವನ್ನ ಮಾರಾಟ ಮಾಡಿದ್ದಾರೆ. ಈ ಮಗುವನ್ನ ಕೊಡಿಸಲು 60 ಸಾವಿರ ಹಣವನ್ನ ಅಂಗನವಾಡಿ ಕಾರ್ಯಕರ್ತೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ.
ಈ ವಿಚಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಗೊತ್ತಾದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರೆಲ್ಲಾ ಅಲ್ಲಿಗೆ ಹೋಗಿ, ಮಗುವನ್ನ ರಕ್ಷಣೆ ಮಾಡಿ ತುಮಕೂರಿನ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಇಡಲಾಗಿದೆ ಎಂದಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ತಾಯಿ, ತಂದೆ, ಹಾಗೂ ಅಂಗನವಾಡಿ ಕಾರ್ಯಕರ್ತೆ, ಮಗು ಖರೀದಿಸಿದ್ದ ಮುಬಾರಕ್ ಸೇರಿದಂತೆ 5 ಜನರ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಇದರಲ್ಲಿ ಮೇಲ್ನೋಟಕ್ಕೆ ಭಾಗಿಯಾಗಿರೋದು ಕಂಡುಬಂದಿದೆ ಎಂದಿದ್ದಾರೆ.
ಈಗಾಗಲೇ ಅವರನ್ನ ಗೌರವ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಮಾಡಲಾಗಿದೆ. ತನಿಖೆ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸುಮಾರು 15 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಕೆಲಸ ಮಾಡ್ತಿದ್ರು. ಮೊದಲು ಮೇಸ್ತ್ರಿರಾಮಯ್ಯನಪಾಳ್ಯ ಅಂಗನವಾಡಿಯಲ್ಲಿ ಕೆಲಸ ಮಾಡ್ತಿದ್ರು. ಸದ್ಯ ಕೊತ್ತಗೆರೆ ಗ್ರಾಮದ ಅಂಗನವಾಡಿಯಲ್ಲಿ 6 ವರ್ಷಗಳಿಂದ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ರು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4