ಗುಜರಾತ್: ಸಿಡಿಲು ಬಡಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಲಾಠಿ ತಾಲೂಕಿನ ಅಂಬರಡಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಸಂಜೆ 6 ಗಂಟೆ ಸುಮಾರಿಗೆ ಅಂಬರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ದಾಮ್ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಲವು ಕೃಷಿ ಕಾರ್ಮಿಕರು ಮತ್ತು ಅವರ ಮಕ್ಕಳು ಹತ್ತಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಸಿಡಿಲು ಬಡಿದ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮೃತರನ್ನು ಭಾರತಿಬೆನ್ ಸಂತಾಲಿಯಾ(35), ಶಿಲ್ಪಾ ಸಂತಾಲಿಯಾ(18), ರೂಪಾಲಿ ವನೋಡಿಯಾ(8), ರಿದ್ಧಿ(5) ಮತ್ತು ರಾಧೆ(5) ಎಂದು ಗುರುತಿಸಲಾಗಿದೆ. ಇಂದು ಈ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296