ಹಿಮಾಚಲ ಪ್ರದೇಶದಲ್ಲಿ ಪ್ರವಾಹಕ್ಕೆ ಮೂರು ದಿನಗಳಲ್ಲಿ ಸತ್ತವರ ಸಂಖ್ಯೆ 71 ಕ್ಕೆ ಏರಿದೆ. ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ, ಸ್ಥಳೀಯ ನಿವಾಸಿಗಳನ್ನು ಹೆಲಿಕಾಪ್ಟರ್ ಮೂಲಕ ಕೆಳಗಿರುವ ಪ್ರದೇಶದಿಂದ ಸ್ಥಳಾಂತರಿಸಲಾಯಿತು.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ ಅವರು ರಾಜ್ಯಕ್ಕೆ ಹತ್ತು ಸಾವಿರ ಕೋಟಿ ರೂಪಾಯಿಗಳಷ್ಟು ಹಾನಿಯಾಗಿದೆ ಎಂದು ಘೋಷಿಸಿದರು. ರಾಜ್ಯದಲ್ಲಿ ರಾಷ್ಟ್ರೀಯ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಸೇನೆ ಮತ್ತು ವಾಯುಪಡೆಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಈ ಮಧ್ಯೆ ಉತ್ತರಾಖಂಡದಲ್ಲಿ ಬಂಡ್ರಿನಾಥ್ ಕೇದಾರನಾಥ ರಸ್ತೆಯನ್ನು ಪುನಶ್ಚೇತನಗೊಳಿಸುವ ಕೆಲಸ ಆರಂಭವಾಗಿದೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ನಂತರ ಪಂಜಾಬ್‌ನ ಹೋಶಿಯಾರ್ ಪುರ, ಗುರುದಾಸ್ ಪುರ ಮತ್ತು ರೂಪನಗರ ಜಿಲ್ಲೆಗಳು ಜಲಾವೃತವಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


