nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಉತ್ತಮ ನಡವಳಿಕೆಗಾಗಿ ಈ ಟಿಪ್ ಅನುಸರಿಸಿ: ನಿಮ್ಮ ಮಕ್ಕಳು ನಿಮ್ಮ ಮಾತು ಕೇಳಿಯೇ ಕೇಳುತ್ತಾರೆ
    ರಾಜ್ಯ ಸುದ್ದಿ February 3, 2024

    ಮಕ್ಕಳ ಉತ್ತಮ ನಡವಳಿಕೆಗಾಗಿ ಈ ಟಿಪ್ ಅನುಸರಿಸಿ: ನಿಮ್ಮ ಮಕ್ಕಳು ನಿಮ್ಮ ಮಾತು ಕೇಳಿಯೇ ಕೇಳುತ್ತಾರೆ

    By adminFebruary 3, 2024No Comments2 Mins Read
    good behave

    ಸಾಮಾನ್ಯವಾಗಿ ಮಕ್ಕಳಿಗೆ 6 ವರ್ಷ ತುಂಬಿದ್ರೆ ಸಾಕು, ಎದುರುತ್ತರ ಕೊಡುತ್ತಾರೆ ಅನ್ನೋ ಮಾತುಗಳನ್ನು ಹೆಚ್ಚಿನ ಪೋಷಕರು ಹೇಳುತ್ತಾರೆ. ಕೆಲವು ಪೋಷಕರು ನಮ್ಮ ಮಕ್ಕಳು ನಮ್ಮ ಯಾವುದೇ ಮಾತನ್ನು ಕೇಳುವುದಿಲ್ಲ ಎನ್ನುವ ದೂರು ಹೇಳುವುದನ್ನು ನೀವು ಕೇಳಿರಬಹುದು.

    ಹೌದು, ಮಕ್ಕಳು ಬೆಳೆದಂತೆ ಅವರ ನಡವಳಿಕೆಯಲ್ಲಿ ಬದಲಾವಣೆಗಳು ಕಂಡು ಬರುವುದು ಸಹಜ. ಯಾಕೆಂದರೆ   ಬೆಳೆಯುತ್ತಿರುವ ಮಕ್ಕಳಲ್ಲಿ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಹಲವು ಬದಲಾವಣೆಗಳನ್ನು ಕಾಣಬಹುದು. ಅಂತಹ ಬದಲಾವಣೆಗಳಲ್ಲಿ ಮಕ್ಕಳು ಎದುರುತ್ತರ ಕೊಡುವ ಸ್ವಭಾವವೂ ಒಂದು. ಮೊದಲಿಗೆ ಮಕ್ಕಳ ಈ ಎದುರುತ್ತರ ಕೊಡುವ ಸ್ವಭಾವ ಸ್ವಾಭಾವಿಕ ಎಂದೆನಿಸಿದರೂ ಬರುಬರುತ್ತಾ ಇದು ಪೋಷಕರ ಕೋಪವನ್ನು ಹೆಚ್ಚಿಸಬಹುದು.

    ಮಕ್ಕಳ ಈ ಸ್ವಭಾವವನ್ನು ಸಕಾರಾತ್ಮಕವಾಗಿ ಬದಲಾಯಿಸಲು ಪೋಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ತಪ್ಪು ಮಾಡಿದಾಗ ಅವರನ್ನು ತಿದ್ದಬೇಕಾಗುತ್ತದೆ. ಅವರನ್ನು ಬೈಯುವ ಬದಲಿಗೆ ಅವರ ಸ್ವಭಾವವನ್ನು ಒಳ್ಳೆಯ ರೀತಿಯಲ್ಲಿ ಬದಲಾಯಿಸಲು ಪ್ರಯತ್ನ ಪಡಿ. ಮಕ್ಕಳು ತಪ್ಪು ಮಾಡಿದಾಗ ಅವರನ್ನು ದಂಡಿಸುವಷ್ಟು ಸುಲಭವಾಗಿ ಅವರು ಒಳ್ಳೆಯ ಕೆಲಸ ಮಾಡಿದಾಗ ಅವರನ್ನು ಪ್ರಶಂಸಿಸುವುದಿಲ್ಲ. ಆದ್ದರಿಂದ ಪೋಷಕರು ಮಕ್ಕಳು ಒಂದು ಸಣ್ಣ ಕೆಲಸವನ್ನು ಸರಿಯಾಗಿ ಮಾಡಿದರೂ ಪ್ರಶಂಸಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು. ವೆರಿ ಗುಡ್‌ ಅನ್ನಬೇಕು. ಇದು ಮಕ್ಕಳಿಗೆ ಪ್ರೋತ್ಸಾಹವನ್ನು ನೀಡುವುದರ ಜೊತೆಗೆ ಅವರ ನೈತಿಕತೆಯನ್ನು ಕೂಡ ಹೆಚ್ಚಿಸುತ್ತದೆ.

    ಕೆಲವೊಮ್ಮೆ ಪೋಷಕರು ಒತ್ತಡದಿಂದ ಇರುವುದರಿಂದಲೋ ಏನೋ ನಿಮ್ಮ ಮಗು ಸುಮ್ಮನೆ ಬೇಸರದಿಂದ ಕುಳಿತಿದೆ ಎನ್ನುತ್ತಾ ಟಿವಿ ಅಥವಾ ಮೊಬೈಲ್ ಲನ್ನು ಹಾಕಿ ಕೊಡಬಹುದು. ಇದರಿಂದ ಅವರ ಈ ಅಭ್ಯಾಸವನ್ನು ತಪ್ಪಿಸಲು   ಬೈಯುವ ಬದಲಿಗೆ ಸೃಜನಶೀಲ ಕೆಲಸವನ್ನು ಮಾಡಲು ಪ್ರೇರೇಪಿಸಬೇಕು. ಅವರ ಮನಸ್ಸು ಸಕಾರಾತ್ಮಕವಾಗಿದ್ದರೆ, ಅವರು ನೀವು ಹೇಳುವುದನ್ನು ಕೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಮನೆಗಳಲ್ಲಿ ತಂದೆ-ತಾಯಿ ಇಬ್ಬರೂ ಕೆಲಸಕ್ಕೆ ಹೋಗುತ್ತಾರೆ. ಈ ವೇಗದ ಜೀವನಶೈಲಿಯಲ್ಲಿ ಪೋಷಕರಿಗೆ ಮಕ್ಕಳೊಂದಿಗೆ ಕುಳಿತು ಆಟವಾಡಲು, ಅವರ ಮಾತುಗಳನ್ನು ಕೇಳಲು ಸಮಯವೇ ಇರುವುದಿಲ್ಲ. ಆದರೆ, ನಿಮ್ಮ ಮಕ್ಕಳು ಒಳ್ಳೆಯ ನಡವಳಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ನೀವು ಬಯಸಿದರೆ, ನಿತ್ಯ ಸ್ವಲ್ಪ ಸಮಯವನ್ನು ನಿಮ್ಮ ಮಕ್ಕಳಿಗಾಗಿ ಮೀಸಲಿಡಿ. ಅವರೊಂದಿಗೆ ಒಂದೆರಡು ಪ್ರೀತಿಯ ಮಾತುಗಳನ್ನು ಆಡಿ.  ಇದು ಅವರ ತಪ್ಪುಗಳನ್ನು ತಿದ್ದಲು ಸಹಾಯಕವಾಗುವುದರ ಜೊತೆಗೆ ಪೋಷಕರು ನಮ್ಮೊಂದಿಗೆ ಇದ್ದಾರೆ ಎಂಬ ಆತ್ಮಸ್ಥೈರ್ಯವನ್ನು ಕೂಡ ಹೆಚ್ಚಿಸುತ್ತದೆ.

    ಇನ್ನೊಂದು ವಿಚಾರವೆಂದರೆ ಹೆಚ್ಚಿನ ಪೋಷಕರು ಮಾಡುವ ಸಾಮಾನ್ಯವಾದ ತಪ್ಪು ಏನೆಂದರೆ,  ಅವರ ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಸುವುದು. ಆದರೆ, ನಿಮ್ಮ ಮಕ್ಕಳನ್ನು ಯಾವತ್ತೂ ಬೇರೆ ಮಕ್ಕಳೊಂದಿಗೆ ಹೋಲಿಸಬಾರದು. ನಿಮ್ಮ ಮಕ್ಕಳ ಆಸಕ್ತಿ ಕ್ಷೇತ್ರ ಬೇರೆಯದ್ದೇ ಇರಬಹುದು. ಆದ್ದರಿಂದ ಮಕ್ಕಳನ್ನು ಇತರರೊಂದಿಗೆ ಹೋಲಿಸಿದಾಗ,ಅವರಿಗೆ ಬೇಸರವಾಗಬಹುದು. ಆಸಕ್ತಿ ಕುಂದಬಹುದು. ಹಾಗಾಗಿ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಮಹತ್ವ ನೀಡಿ.. ಅವರೊಂದಿಗೆ ಸಾಧ್ಯವಾದಷ್ಟು ಕಾಲ ಕಳೆಯಿರಿ. ಯಾಕೆಂದ್ರೆ ಪ್ರತಿಯೊಬ್ಬ ತಂದೆ ತಾಯಿಗೂ ಮಕ್ಕಳೇ ಪ್ರಪಂಚ ಆಗಿರ್ತಾರೆ ಅನ್ನೋದು ಸುಳ್ಳಲ್ಲ.

     


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.