ಲಂಚ ಸ್ವೀಕರಿಸುತ್ತಿದ್ದ ವೇಳೆ ಫುಡ್ ಇನ್ ಸ್ಪೆಕ್ಟರ್ ಹಾಗೂ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರುಕಟ್ಟೆ ಸೊಸೈಟಿ ಸೆಕ್ರೆಟರಿಯನ್ನು ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.
ಫುಡ್ ಇನ್ ಸ್ಪೆಕ್ಟರ್ ಶ್ರೀಧರ್ ಹಾಗೂ TAPCMS ಸೆಕ್ರೆಟರಿ ಹಾಗೂ ಮ್ಯಾನೇಜರ್ ಉಮೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶ್ರೀಧರ್, ಉತ್ತರಹಳ್ಳಿ ಮತ್ತು ಕೆಂಗೇರಿ ವಿಭಾಗದ ಫುಡ್ ಇನ್ ಸ್ಪೆಕ್ಟರ್ ಆಗಿದ್ದಾರೆ.
ನ್ಯಾಯಬೆಲೆ ಅಂಗಡಿ ಲೈಸೆ ನ್ಸ್‌ಗೆ ಇವರರಿಬ್ಬರೂ ಲಂಚದ ಬೇಡಿಕೆ ಇಟ್ಟಿದ್ದರು. ರಫೀಕ್ ಎಂಬವರ ಬಳಿ 2.5 ಲಕ್ಷ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ರಫೀಕ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 1.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅದಕ್ಕೂ ಮೊದಲೇ ಫುಡ್ ಇನ್ ಸ್ಪೆಕ್ಟರ್ 1 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದ. ಸದ್ಯ ಇಬ್ಬರನ್ನೂ ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.


