ತುಮಕೂರು: ಶಾಲೆಯಲ್ಲಿ ಊಟ ಸೇವಿಸಿದ್ದ ಇಬ್ಬರು ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸೀನಪ್ಪನಹಳ್ಳಿನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇರಿಸಿದ್ದ ವಿದ್ಯಾರ್ಥಿಗಳು. ನಿನ್ನೆ ರಾತ್ರಿ ವಿದ್ಯಾರ್ಥಿಗಳು ಮನೆಗೆ ಹೋದಾಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.
ಕೂಡಲೇ ರಾತ್ರೋರಾತ್ರಿ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಕುಣಿಗಲ್ ತಾಲ್ಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಅದರಲ್ಲಿ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಟ್ಟು 80 ವಿದ್ಯಾರ್ಥಿಗಳಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಾಗಿದೇ.
ಸ್ಥಳಕ್ಕೆ ಕುಣಿಗಲ್ ಟಿಹೆಚ್ ಓ ಹಾಗೂ ಆರೋಗ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೂ ಗಂಭೀರಗೊಂಡ 10 ವಿದ್ಯಾರ್ಥಿಗಳಿಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.


