ಇತ್ತೀಚೆಗಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಾಂಬ್ ದಾಳಿ ನಡೆದ ನಂತರ ಸಂಚಲನ ಮೂಡಿಸಿತ್ತು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದೀಗ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಉಪಾಹಾರಕ್ಕೆ ಹೆಸರುವಾಸಿಯಾದ ಈ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಮೇಲೆ ಹೈದರಾಬಾದ್ ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವರ್ಷದ ಜನವರಿಯಲ್ಲಿ ಹೈದರಾಬಾದ್ ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್ ಪ್ರಾರಂಭಿಸಲಾಗಿತ್ತು. ಈ ಕೆಫೆಯು ಇಡ್ಲಿ ಮತ್ತು ದೋಸೆಗೆ ಹೆಸರುವಾಸಿಯಾಗಿದೆ.
ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ನಲ್ಲಿ ಕಂಡು ಬಂದ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಕಂಡು ಹಿಡಿದಿದ್ದಾರೆ.
ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ 16,000 ರೂ ಮೌಲ್ಯದ 100 ಕೆ.ಜಿ. ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು, ಎಂಟು ಲೀಟರ್ ಹಾಲು ಅವಧಿ ಮೀರಿದ್ದು ಅಡುಗೆಮನೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಜೊತೆಗೆ ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿದ್ದಾರೆ.
450 ಕೆಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲ ಇರುವುದು ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ.
ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ, ಜೊತೆಗೆ ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


