ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬೈಬಲ್ ಒಂದು ರೀತಿ ಸಂವಿಧಾನವಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಟೀಕಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇಪದೇ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ರಾಹುಲ್ ಗಾಂಧಿ ಓಡಾಡುತ್ತಾರೆ, ಆದರೆ ಅವರು ಬೈಬಲ್ ಹಿಡಿದುಕೊಂಡು ಓಡಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಎಸ್ ಸಿ ಎಸ್ ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಪಂಚ ಶಕ್ತಿ ಯೋಜನೆಗಳಿಗೆ ವಿನಿಯೋಗ ಮಾಡಲಾಗುತ್ತಿದೆ. ಆದರೆ ಅಲ್ಪಸಂಖ್ಯಾತರ ಇಲಾಖೆಗೆ ಮೀಸಲಿಟ್ಟಿರುವ ಹಣವನ್ನು ಬಳಸಲು ಮುಂದಾಗುತ್ತಿಲ್ಲ. ಈ ಮೂಲಕ ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಬಳಸಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಆದರೆ ರಾಹುಲ್ ಗಾಂಧಿ ಸಂವಿಧಾನವನ್ನು ಬೈಬಲ್ ರೀತಿ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


