ಬೆಂಗಳೂರು: ಶಾಸಕರಿಗೆ ಆಮಿಷ ಒಡ್ಡುವುದು ಜೆಡಿಎಸ್ ಸಂಸ್ಕೃತಿಯಲ್ಲ, ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದ ಬಳಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ನಮ್ಮ ಶಾಸಕರನ್ನು ಸೆಳೆಯಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರ ಎಂದು ಆರೋಪಿಸಿದರು.
ಕಳೆದ ಹತ್ತು ತಿಂಗಳಿಂದ ನಮ್ಮ ಶಾಸಕರಿಗೆ ಕಾಂಗ್ರೆಸ್ ನವರು ಗಾಳ ಹಾಕುತ್ತಲೇ ಇದ್ದಾರೆ. ಕರೆಮ್ಮ ಮತ್ತು ಶರಣಗೌಡ ಕಾಂಗ್ರೆಸ್ ಸೇರುತ್ತಾರೆ ಎಂದು ಸುದ್ದಿಯನ್ನೂ ಹಬ್ಬಿಸಿದ್ದರು. ಆದರೆ ನಮ್ಮ 19 ಮಂದಿ ಶಾಸಕರೂ ನಮ್ಮ ಜೊತೆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ಳಿ ಕಪ್ ಹಂಚಿ ಗೆದ್ದಿದ್ದಾರೆ. ಇದರ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಈ ಬಾರಿ ನಮಗೆ ಸೋಲು ಗೆಲುವು ಮುಖ್ಯವಲ್ಲ ಎಂದು ಹೆಚ್‌ಡಿಕೆ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296