ಬೆಂಗಳೂರು: ನಟ ದರ್ಶನ್ ತಮ್ಮ ಮೈಸೂರು ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ನಿಷೇಧಿತ ‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು.
ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿ ಜುಲೈ 4 ರಂದು ನ್ಯಾಯಾಲಯಕ್ಕೆ ಜರಾಗುವಂತೆ ಸೂಚಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW