ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಿನ್ನೀರಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಳ್ಳೂರು ಗ್ರಾಮದ ಜಡಿಯ(56) ಮೃತ ವ್ಯಕ್ತಿ.
ಬೇಸಿಗೆಯ ದಗೆ ಹಿನ್ನಲೆ ಹಿನ್ನೀರಿನ ಬಳಿ ನೀರು ಕುಡಿಯಲು ಕಾಡುಪ್ರಾಣಿಗಳು ಆಗಮಿಸಿದ್ದವು. ಇದೇ ವೇಳೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ.
ಸದ್ಯ ಸ್ಥಳಕ್ಕೆ ಬಿ.ಆರ್.ಟಿ. ಸಿಸಿಎಫ್ ಹೀರಾಲಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


