ಬೆಂಗಳೂರು: ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು.
ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸಿಎಂ ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4