ಸರಗೂರು: ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ತಾಲೂಕಿನ ಬಂಡಿಪುರ ಅಭಯಾರಣ್ಯ ಹೆಡಿಯಾಲ ವಲಯದ ವ್ಯಾಪ್ತಿಯಲ್ಲಿ ಬರುವ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನಕ್ಕೆ ಹೋಗಲು ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಹಾಗೂ ಭಕ್ತರಿಗೆ ದೇವರ ದರ್ಶನ ಪಡೆಯಲು ಅನುಮತಿ ನೀಡಿದೆ ತೊಂದರೆ ನೀಡುತ್ತಿದ್ದಾರೆ ಎಂದು ಸಭಾಧ್ಯಕ್ಷರಿಗೆ ತಿಳಿಸಿದರು.
ಸುಮಾರು ವರ್ಷಗಳಿಂದ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವವನ್ನು ಟ್ರಸ್ಟ್ ವತಿಯಿಂದ ವಿಜೃಂಭಣೆಯಿಂದ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಅದರೆ ಮೂರು ನಾಲ್ಕು ವರ್ಷಗಳಿಂದ ಅರಣ್ಯ ಅಧಿಕಾರಿಗಳು ಭಕ್ತರನ್ನು ಖಾಸಗಿ ಹಾಗೂ ಸರ್ಕಾರಿ ವಾಹನಗಳನ್ನು ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲ ಎಂದು ತೊಂದರೆ ನೀಡುತ್ತಿದ್ದಾರೆ ಎಂದರು.
ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನ ಸೇರ್ಪಡೆಗೊಂಡದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅ ಭಾಗದ ಸಚಿವರು ಹಾಗೂ ಶಾಸಕರ ಬೇಲದಕುಪ್ಪೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ. ಸಾರ್ವಜನಿಕರು ಹಾಗೂ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಬಿಡುತ್ತಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ದೇವಾಸ್ಥಾನ ಸೇರಿಕೊಂಡರು ಜಿಲ್ಲಾಡಳಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಜಾತ್ರಾ ಮತ್ತು ಅಮಾವಾಸ್ಯೆ ಪೂಜೆ ಗಳಿಗೆ ಅವಕಾಶ ನೀಡುತ್ತಿಲ್ಲ. ಪ್ರತಿ ವರ್ಷ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಟ್ರಸ್ಟ್ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ನಡುವೆ ಸಭೆ ಮಾಡುವ ಸಮಯದಲ್ಲಿ ವಾಗ್ದಾಳಿ ನಡೆಯುತ್ತಿದೆ.ಅದರಿಂದ ಅರಣ್ಯ ಸಚಿವರು ಹಾಗೂ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನಕ್ಕೆ ಸಾರ್ವಜನಿಕರು ಹಾಗೂ ಭಕ್ತರಿಗೆ ಪ್ರತಿ ದಿನ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು.
ಜಾತ್ರೆ ಮಾಡುವ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಧಾರ್ಮಿಕ ದತ್ತಿ ಇಲಾಖೆ ರವರಿಗೆ ಬಿಡುವುದಿಲ್ಲ. ಆ ದೇವಸ್ಥಾನಕ್ಕೆ 2–3 ಲಕ್ಷ ಭಕ್ತರು ಆಗಮಿಸುತ್ತಾರೆ.ದೇವರ ದರ್ಶನ ಪಡೆಯಲು ಅನುಮತಿ ನೀಡಬೇಕು ಎಂದು ಹೇಳಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4