ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೋಮವಾರ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
91 ವರ್ಷ ವರ್ಷದ ಮಾಜಿ ಸಿಎಂ ಆರೋಗ್ಯ ವೈದ್ಯಕೀಯವಾಗಿ ಸ್ಥಿರವಾಗಿದೆ ಮತ್ತು ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.
ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296