ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹೌದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದು, ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ.
ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು.
ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


