ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಪಥ ಮಾಡಿದ್ದಾರೆ.
ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಈ ವೇಳೆ ಹೆಚ್ ಡಿ ಕೆ ಮಾತನಾಡಿ, ವಿರೋಧ ಪಕ್ಷದಲ್ಲಿ ನಾನು ಇದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ ಎಂದರಲ್ಲದೇ ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದ್ರೆ ಈ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


