ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ.ಮೇಟಿ ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


