ಬೀದರ್: ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
102 ವಯಸ್ಸಿನ ಭೀಮಣ್ಣ ಖಂಡ್ರೆ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಅವರು ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕರಾಗಿದ್ದಾರೆ. ಅವರ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ಅವರು ವೈದ್ಯರ ನಿಗಾದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿ: ಅರವಿಂದ್ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


