ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ 5 ಲಕ್ಷ ಬಾಂಡ್, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ
ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್ ಸುಧೀರ್ಘವಾಗಿ ವಿಚಾರಣೆ ನಡೆಯಿತು. ರೇವಣ್ಣ ಪರ ವಕೀಲರಾದ ನಾಗೇಶ್ ಹಾಗೂ ಎಸ್ಐಟಿ ಪರ ವಕೀಲರಾದ (ಎಸ್ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್ ನಾಯ್ಕ್ ಸರ್ಕಾರದ ಪರವಾಗಿ ವಾದಿಸಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ಹಾಗೂ ಸಾಕ್ಷ್ಯಾಧಾರ ನಾಶಪಡಿಸಬಾರದು, ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ, ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳೊಂದಿಗೆ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA