ಕೊರಟಗೆರೆ : ಜನ ಮೆಚ್ಚಿದ ನಾಯಕ, ಆಧುನಿಕ ಭಗೀರಥ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್‌ರವರ 58ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸುಧಾಕರ್ ಲಾಲ್ ಅಭಿಮಾನಿ ಬಳಗ ಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ, ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದ್ದು, ಮಾಜಿ ಶಾಸಕ ಸುಧಾಕರ್ ಲಾಲ್ ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.
ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಶ್ರೀಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅಪ್ಪಾಜಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಣ್ಣನವರ, ವಿ.ಸೋಮಣ್ಣ, ಹಾಗೂ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಬಡವರ ಕೆಲಸಗಳನ್ನು ಮುಂದುವರೆಸಿಕೊಂಡು ಬಂದಿದ್ದೇನೆ, ಇಂದು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳ ಬಳಗವು ನನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿ ಅಭಿಮಾನ ತೋರಿದ್ದು, ಪ್ರತಿಯೊಬ್ಬರ ಪ್ರೀತಿಗೂ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.
ಜೆಡಿಎಸ್ ಪಕ್ಷದ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಮಾಜಿ ಶಾಸಕ ಸುಧಾಕರ್ ಲಾಲ್ ಅವರ 58ನೇ ವರ್ಷ ಹುಟ್ಟು ಹಬ್ಬವನ್ನು ಬಡರೋಗಿಗಳಿಗೆ ಬ್ರೆಡ್, ಹಣ್ಣು, ಕಟ್ಟೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಅಭಿಮಾನಿಗಳ ಸಮ್ಮುಖದಲ್ಲಿ ಮಾಜಿ ಶಾಸಕರು ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮುಂದಿನ ತಾ.ಪಂ, ಜಿ.ಪಂ ಚುನಾವಣೆ ಎದುರಿಸಲು ಈಗಾಗಲೇ ಪಕ್ಷವು ಹಲವಾರು ಸಿದ್ಧತೆ ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ ಚುನಾವಣೆ ತಾ.ಪಂ. ಮತ್ತು ಜಿ.ಪಂ ಚುನಾವಣೆ ನಡೆಸುವಂತೆ ಕಾಣಿಸುತ್ತಿಲ್ಲ, ಜನ ಮೆಚ್ಚಿಸಲು ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾರೆ. ಡಿಸೆಂಬರ್ ನಲ್ಲಿ ಗ್ರಾ.ಪಂ ನಡೆಯಬಹುದೆಂಬ ಕುತೂಹಲವಿದೆ. ಸರ್ಕಾರದಲ್ಲಿನ ನಾಯಕರುಗಳೇ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಚುನಾವಣೆ ನಡೆಸುತ್ತಾರೆಂಬ ಭರವಸೆಯಂತು ಇಲ್ಲಾ, ಸ್ಥಳೀಯ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ, ಸಂವಿಧಾನ ಬದಲಾವಣೆ ಮಾಡುವ ಚಿಂತನೆ ನಡೆಸುತ್ತಿದಿಯಾ ಸರ್ಕಾರ ಎಂಬುದು ಪ್ರಶ್ನೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ ಮಾತನಾಡಿ, ಮಾಜಿ ಪಿ ಆರ್ ಶಾಸಕ ಸುಧಾಕರ್ ಲಾಲ್ ಹುಟ್ಟು ಹಬ್ಬವನ್ನು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಣೆ ಮಾಡಲಾಗುತ್ತಿದೆ. 2013 ರಿಂದ 2018ರವರೆಗೂ ಕ್ಷೇತ್ರದಲ್ಲಿ ಶಾಸಕರಾಗಿ ಗ್ರಾಮೀಣ ಭಾಗದ ಹಳ್ಳಗಳಿಗೆ ಚೆಕ್ ಡ್ಯಾಂ, ಗಂಗಾ ಕಲ್ಯಾಣ ಯೋಜನೆಯಲ್ಲಿ ರೈತರಿಗೆ ಪಂಪ್ ಸೆಟ್ ವಿತರಣೆ, ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ, ವಸತಿ ವ್ಯವಸ್ಥೆ, ಬಡ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಿ ಶಾಸ್ತ್ರ ಚಿಕಿತ್ಸೆಗೆ ಅನುಕೂಲ ಕಲ್ಪಿಸಿದ್ದು, ಇಂದಿಗೂ ಬಡಜನರ ನಿರಂತರ ಸಂಪರ್ಕದಲ್ಲಿದ್ದು ತಮ್ಮ ಸಾಮಾಜಿಕ ಸೇವೆಯನ್ನು ಮುಂದುವರೆಸಿದ್ದಾರೆ ಎಂದು ಹೇಳಿದರು.
ಈ ವೇಳೆ ಜೆಡಿಎಸ್ ಯುವಾಧ್ಯಕ್ಷ ವೆಂಕಟೇಶ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಪ.ಪಂ ಸದಸ್ಯ ಲಕ್ಷ್ಮಿ ನಾರಾಯಣ್, ಸಿದ್ದಮಲ್ಲಪ್ಪ, ಕೋಡ್ಲಹಳ್ಳಿ ವೆಂಕಟೇಶ್, ಮುಖಂಡರಾದ ಅಶ್ವತ್ಥ್ ನಾರಾಯಣರಾಜು, ಲಕ್ಷ್ಮಿನರಸಪ್ಪ, ರಮೇಶ್, ಮಂಜುನಾಥ್, ಸಂತೋಷ್, ಹರೀಶ್ ಬಾಬು, ಸಾಕಣ್ಣ, ಸಿದ್ದಪ್ಪ, ಹಯ್ಯದ್ ಖಾನ್, ಮಂಜುನಾಥ್, ಕಾಕಿ ಮಲ್ಲಯ್ಯ, ಶ್ರೀಧರ್, ಪಾಡುರಂಗ, ಮಧು ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC