ಬೆಳಗಾವಿ: ನೂರಕ್ಕೂ ಹೆಚ್ಚು ಗೂಂಡಾಗಳ ಮೂಲಕ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಂಬಲಿಗರ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅವಾಚ್ಛ ಶಬ್ಧಗಳಿಂದ ನಿಂದಿಸಿದ್ದು, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಗಾಜಿನ ಬಾಟಲ್, ಕಲ್ಲುಗಳನ್ನು ಹಿಡಿದು ಮನೆಯೊಳಗೆ ನುಗ್ಗಲು ಯತ್ನಿಸಿದ್ದು, ಬೆಲೆಬಾಳುವ ವಸ್ತುಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಇದಕ್ಕೆಲ್ಲ ನೇರವಾಗಿ ಅವರೇ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಪ್ರಚೋದನೆ ನೀಡಿದವರು ಮತ್ತು ನನ್ನ ಕೊಲೆಗೆ ಯತ್ನಿಸಿದವರು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಯಿಷಾ ಸನದಿ, ಸುಜಯ್ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ, ರೋಹಿಣಿಬಾಬ್ಟೆ, ಮುಷ್ತಾಕ್ ಮುಲ್ಲಾ, ಸದ್ದಾಂ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ್, ಭಾರತಿ ಸೇರಿ ನೂರಕ್ಕೂ ಅಧಿಕ ಜನರ ಮೇಲೆ ಕ್ರಮ ಕೈಗೊಳ್ಳುವಂತೆ ಸಂಜಯ್ ಪಾಟೀಲ್ ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ಮನೆ ಎದುರು ಪ್ರತಿಭಟನೆ ಮಾಡಿದ್ದರು. ಬಳಿಕ ನಿನ್ನೆ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296