ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಬೆಂಗಳೂರಿನ ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು.


