ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪಾದಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯ ತಾಲೂಕಿನ ತೂಬಿನಕೆರೆಯಿಂದ ಇಂದು ಪಾದಯಾತ್ರೆ ಹೊರಟಿತು. ಶಂಖನಾದದ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಮಂಡ್ಯದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಸಂಸದೆ ಸುಮಲತಾ ಗೈರು ಹಾಜರಾಗಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗದೇ ದೂರ ಉಳಿದಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇದೀಗ ದೋಸ್ತಿಗಳ ಪಾದಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


