ತುಮಕೂರು: ದಶಕಗೂ ಹೆಚ್ಚು ದಿನಗಳಿಂದ ತಲೆ ಮರೆಸಿಕೊಂಡಿದ್ದ ಮಾಜಿ ನಕ್ಸಲ್ ಚಂದ್ರ ಎಂಬಾತನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಚಂದ್ರ, 2005ರಲ್ಲಿ ವೆಂಕಟಮ್ಮನಹಳ್ಳಿಯ ಕೆಎಸ್ ಆರ್ಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ ಆರೋಪಿಯಾಗಿದ್ದಾನೆ.
ಓರ್ವ ಸಾರ್ವಜನಿಕ ಸೇರಿ 7 ಜನ ಪೊಲೀಸರನ್ನ ಹತ್ಯೆ ಮಾಡಲಾಗಿತ್ತು, ಹತ್ಯೆ ಮಾಡಿ ಶಸ್ತ್ರಾಸ್ತ್ರಗಳ ದೋಚಲಾಗಿತ್ತು. ಈ ಸಂಬಂಧ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಚಂದ್ರ, ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕೇಶಾವಾಪುರಂ ಗ್ರಾಮದ ನಿವಾಸಿಯಾಗಿದ್ದಾನೆ.
ಈತನ ವಿರುದ್ಧ ಪಾವಗಡ ಜೆಎಂಎಫ್ಸಿ ನ್ಯಾಯಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ಎಸ್ಪಿ ಕೆ.ವಿ ಅಶೋಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಾಜಿ ನಕ್ಸಲ್ ಚಂದ್ರನ ಬಂಧನ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA