ಟೀಮ್ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಮಾನಸಿಕ ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ ರೌಂಡರ್ ಆಗಿದ್ದ ಅವರು ಟೆಸ್ಟ್ ನಲ್ಲಿ 8 ರನ್ ಮತ್ತು 3 ವಿಕೆಟ್ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು.
ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಇತ್ತೀಚೆಗೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


