ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಮ್ಮ 92ನೇ ವಯಸ್ಸಿನಲ್ಲಿ ಮನಮೋಹನ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ.
ಇಂದು ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ.
ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ಸರ್ಕಾರಿ ರಜೆ ಘೋಷಣೆ:
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx