nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರ್ಮಿಕ ಕ್ಷೇತ್ರ ಸಿದ್ದರಬೆಟ್ಟದ ಮುಖ್ಯರಸ್ತೆಯ ಅಭಿವೃದ್ಧಿಗೆ ಶಂಕುಸ್ಥಾಪನೆ
    ಕೊರಟಗೆರೆ April 8, 2025

    ಧಾರ್ಮಿಕ ಕ್ಷೇತ್ರ ಸಿದ್ದರಬೆಟ್ಟದ ಮುಖ್ಯರಸ್ತೆಯ ಅಭಿವೃದ್ಧಿಗೆ ಶಂಕುಸ್ಥಾಪನೆ

    By adminApril 8, 2025No Comments2 Mins Read
    sidhara betta

    ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಮತ್ತು ನೇಗಲಾಲ ಗ್ರಾಮದ ಜನರ ಮತ್ತು ವಿದ್ಯಾರ್ಥಿಗಳ ಹಾಗೂ ಶ್ರೀ ಕ್ಷೇತ್ರ ಸಿದ್ದರಬೆಟ್ಟಕ್ಕೆ ಬರುವಂತಹ ಭಕ್ತರ ಹಾಗೂ ಪ್ರವಾಸಿಗರ ಬಹುದಿನಗಳ ಬೇಡಿಕೆ ಸುಮಾರು ಎರಡು ಕಿಲೋ ಮೀಟರ್ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊರಟಗೆರೆ ಲೋಕೋಪಯೋಗಿ ಇಲಾಖೆಯು ರಸ್ತೆ ಅಭಿವೃದ್ಧಿ ಪಡಿಸಲು ಇದೀಗ ಮುಂದಾಗಿದೆ.

    ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಸುಮಾರು ಒಂದು ಕೋಟಿ ಐವತ್ತು ಲಕ್ಷ ರೂ ಅನುದಾನವನ್ನು ರಸ್ತೆಗೆ  ಮೀಸಲಿಟ್ಟಿದ್ದಾರೆ. ಅವರ ಮಾರ್ಗದರ್ಶನದಂತೆ ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ನಾಗಣ್ಣ ಸ್ಥಳೀಯ ಮುಖಂಡರೊಂದಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

    ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶಂಕುಸ್ಥಾಪನೆಯ ಕಾರ್ಯ ಸುಗಮವಾಗಿ ಸಾಗಿದೆ.

    ನೇಗಲಾಲ ಮತ್ತು ಸಿದ್ದರಬೆಟ್ಟ ಗ್ರಾಮಸ್ಥರ ಬಹುದಿನದ ಮುಖ್ಯ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಯು ಮಾನ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಆದೇಶದ ಮೇರೆಗೆ ಇದೀಗ ಶಂಕು ಸ್ಥಾಪನೆ ಕಾರ್ಯ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದಿದೆ. ಈ ರಸ್ತೆ ಮಾರ್ಗವಾಗಿ ಸಂಚರಿಸುವ ವಾಹನ ಸವಾರರಿಗೆ ಅನುಕೂಲವಾಗಲಿದೆ. ಗ್ರಾಮಗಳಿಗೆ ಹೆಚ್ಚಿನ ಮೂಲ ಸೌಕರ್ಯ ದೊರಕಿಸಲು ಸರ್ಕಾರ ಮುಂದಾಗಿದೆ. ಗ್ರಾಮಗಳು ಅಭಿವೃದ್ಧಿಯಾದರೆ, ದೇಶ ಅಭಿವೃದ್ದಿ ಹೊಂದಲಿದೆ. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆಯನ್ನು ನಿಗದಿತ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಪಿಡಬ್ಲ್ಯೂಡಿ ಎಇಇ ಕೆ ಎಸ್ ಸ್ವಾಮಿಗೆ ಸೂಚಿಸಿದರು.

    —  ಡಾ.ಕೆ.ನಾಗಣ್ಣ,  ಗೃಹ ಸಚಿವರ ವಿಶೇಷ ಕರ್ತವ್ಯಧಿಕಾರಿ.


    ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಸಹಕಾರದಿಂದ ನನೆಗುದಿಗೆ ಬಿದ್ದಿದ್ದ ರಸ್ತೆಯ ಭೂಮಿ ಪೂಜೆ ನೆರವೇರಿದೆ. ಕಳೆದ ಐದಾರು ವರ್ಷಗಳಿಂದ ರಸ್ತೆಯು ಅಭಿವೃದ್ಧಿಯಾಗದೆ ತೊಂದರೆ ಉಂಟಾಗುತ್ತಿತ್ತು. ಶ್ರೀ ಕ್ಷೇತ್ರ ಸಿದ್ದರಬೆಟ್ಟವು ಪ್ರವಾಸಿಗರ ಕ್ಷೇತ್ರವಾಗಿದ್ದು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಪ್ರವಾಸಿಗರು ಕ್ಷೇತ್ರಕ್ಕೆ ಬರುತ್ತಾರೆ. ಗ್ರಾಮೀಣ ಭಾಗದ ರಸ್ತೆ ಸುಗಮವಾಗಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಪ್ರವಾಸಿಗರು ಬರುತ್ತಾರೆ. ಈ ಕಾರಣದಿಂದ ಡಾ.ಜಿ.ಪರಮೇಶ್ವರ್ ಹೆಚ್ಚಿನ ಸಹಕಾರ ನೀಡಿದ್ದಾರೆ. ಅವರಿಗೆ ಎಲ್ಲರ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹಾಗೂ ಈ ಭಾಗದ ಎಲ್ಲಾ ರೈತರಿಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ರಸ್ತೆ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.

    — ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿಗಳು, ಶ್ರೀ ಕ್ಷೇತ್ರ ಸಿದ್ದರಬೆಟ್ಟ.


    ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಸಿದ್ದರಬೆಟ್ಟವು ಒಂದು ಪ್ರವಾಸೋದ್ಯಮ ಕ್ಷೇತ್ರ ವಾಗಿದ್ದು ಈ ಕ್ಷೇತ್ರಕ್ಕೆ ಹೆಚ್ಚಿನದಾಗಿ ಪ್ರವಾಸಿಗರು ಮತ್ತು ಭಕ್ತರು ಬರುತ್ತಾರೆ. ಈ ಭಾಗದ ರಸ್ತೆಯು ಕಳೆದ ಐದಾರು ವರ್ಷಗಳಿಂದ ಅಭಿವೃದ್ಧಿಗೊಳ್ಳದೆ ನೆಲಗುದಿಗೆ ಬಿದ್ದಿತ್ತು. ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ವಿಶೇಷ ಕಾಳಜಿಯೊಂದಿಗೆ ಇದೀಗ ರಸ್ತೆ ಅಭಿವೃದ್ಧಿ ಆಗುತ್ತಿದೆ ಇದರಿಂದ ಸಾವಿರಾರು ಜನ ರೈತರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು..

    ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಕೆ ಎಸ್ ಸ್ವಾಮಿ, ಸಹಾಯ ಇಂಜಿನಿಯರ್ ನಿಖಿಲ್, ಕಿರಿಯ ಇಂಜಿನಿಯರ್, ಹೇಮಂತ್, ಗುತ್ತಿಗೆದಾರರಾದ ಶಿವಾನಂದ್, ಮನೋಜ್ ಸ್ಥಳೀಯ ಮುಖಂಡರಾದ ಮಾಜಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಪುಟ್ಟನರಸಪ್ಪ, ಸೋಮಣ್ಣ, ಅರವಿಂದ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಕವಿತಾ ರಮೇಶ್, ಪಿಡಿಒ ನಾಗವೇಣಿ, ನರಸಿಂಹಮೂರ್ತಿ, ಪ್ರಕಾಶ್, ಅಖಂಡರಾಧ್ಯ, ಸುರೇಶ್ ಎನ್ ಎಸ್, ಶ್ರೀರಂಗಪ್ಪ, ಮಂಜುನಾಥ್ ಇತರರು ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.