ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ನಾಲ್ಕು ಎಮ್ಮೆ ಮತ್ತು ಒಂದು ಕೋಣ ಸಾವನ್ನಪ್ಪಿದ ಘಟನೆ ನಡೆದಿದೆ. ಸಾಬಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಎಮ್ಮೆಗಳ ಸಾವನ್ನಪ್ಪಿವೆ. ಮೃತಪಟ್ಟ ಪ್ರತಿಯೊಂದು ಎಮ್ಮೆಯೂ 2 ಲಕ್ಷ ರೂಪಾಯಿ ಬೆಲೆ ಬಾಳುತ್ತಿದೆ ಎಂದು ಹೇಳಲಾಗಿದೆ.
ಜಮೀನಿನಲ್ಲಿ ಅಪಾಯಕಾರಿ ವಿದ್ಯುತ್ ತಂತಿ ಜೋತು ಬಿದ್ದಿರುವ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು.
ಹೈನುಗಾರಿಕೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಈಗ ಸಂಕಷ್ಟದಲ್ಲಿದೆ. ಸೂಕ್ತ ಪರಿಹಾರ ಕಲ್ಪಿಸಲು ಒತ್ತಾಯ ಮಾಡಲಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


