ಬೆಂಗಳೂರು: ಕೊವಿಡ್ 19ಗೆ ಗುರುವಾರ ನಾಲ್ವರು ಬಲಿಯಾಗಿದ್ದು, 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.
ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಕೋವಿಡ್ 19 ಪಾಸಿಟಿವ್ ಆಗಿ ಆಸ್ಪತ್ರೆಗೆ ಸೇರ್ಪಡೆಯಾಗಿದ್ದ 229 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


