ಚಂಡೀಗಢ: ಪಂಜಾಬ್ ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಹೌರಾ ಮೇಲ್ನ ಜನರಲ್ ಕೋಚ್‌ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ.
ಶನಿವಾರ ರಾತ್ರಿ 10:30ರ ಸುಮಾರಿಗೆ ರೈಲು ಅಮೃತಸರದಿಂದ ಹೌರಾಕ್ಕೆ ತೆರಳುತ್ತಿದ್ದಾಗ ಪಟಾಕಿಗಳನ್ನು ತುಂಬಿದ್ದ ಪ್ಲಾಸ್ಟಿಕ್ ಬಕೆಟ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಸಿಂಗ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296