ತುಮಕೂರು: ದ್ವಿಚಕ್ರ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದನ್ನು ಕಂಡು ದಂಡ ವಿಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರು ಯುವಕರನ್ನು ಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತುಮಕೂರು ನಗರದ ರಾಣಿ ಚೆನ್ನಮ್ಮ ಸರ್ಕಲ್ ಬಳಿ ಇರುವ ರಿಂಗ್ ರಸ್ತೆಯಲ್ಲಿ ಜನವರಿ 27 ರಂದು ಸಂಜೆ 7:30ರಲ್ಲಿ ಘಟನೆ ನಡೆದಿದೆ.
ತುಮಕೂರು ನಗರದ ಮೊಹಮದ್ ಇಸ್ಮಾಯಿಲ್, ಮೊಹಮದ್ ಅಬ್ಬಾಸ್, ಅದ್ಮಾನ್ ಅಹಮದ್, ಮೊಹಮದ್ ಅಲೀ ಬಂಧಿತ ಆರೋಪಿಗಲಾಗಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ಮಹಿಳಾ ಪಿ.ಎಸ್.ಐ. ಟಿ.ಎಸ್. ಚಂದ್ರಕಲಾ ಮತ್ತು ಎ.ಎಸ್.ಐ. ಮೋಹನ್ ಕುಮಾರ್ ಕೆ. ಹಾಗೂ ಸಿಬ್ಬಂದಿ ತಮ್ಮರಾಯ ಮಾಡಕರಿರವರುಗಳು ರಾಣಿ ಚೆನ್ನಮ್ಮ ಸರ್ಕಲ್ ಬಳಿ ಅನುಚಿತವಾಗಿ ವರ್ತಿಸಿದ್ದರು.
ಈ ವೇಳೆ ಸರ್ವಿಸ್ ರಸ್ತೆಯಿಂದ ರಿಂಗ್ ರಸ್ತೆಗೆ KA–06–EV–3695 ನೇ ನಂಬರಿನ ಹೋಂಡಾ ಆಕ್ಟಿವಾ ಸ್ಕೂಟರ್ ನಲ್ಲಿ 4 ಜನ ಯುವಕರು ಒಂದೇ ದ್ವಿಚಕ್ರ ವಾಹನದಲ್ಲಿ ಕುಳಿತುಕೊಂಡು, ಯಾವುದೇ ಹೆಲ್ಮೇಟ್ ಧರಿಸದೆ, ರಾಂಗ್ ರೂಟಿನಲ್ಲಿ ತಮ್ಮ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದರು. ರಸ್ತೆ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ್ದವರನ್ನು ತಡೆದು ನಿಲ್ಲಿಸಿ ಸ್ಥಳ ದಂಡವನ್ನು ಪಾವತಿಸುವಂತೆ ಸೂಚಿಸಿದಾಗ, ಸದರಿ 4 ಜನ ಯುವಕರು ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವ್ಯಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
ಪೊಲೀಸರನ್ನು ತಳ್ಳಿ ಕೆಳಗೆ ಬೀಳಿಸಿ ದುರ್ನಡತೆ ತೋರಿ ಮತ್ತೆ ಆ ಯುವಕರುಗಳು ತಮ್ಮ ಮೊಬೈಲ್ ಪೋನ್ ಗಳಲ್ಲಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳು ಮಾಹಿತಿಯನ್ನು ವೈರಲ್ ಮಾಡಿದ್ದರು.
ವಿನಾಕಾರಣ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಕಿಡಿಗೇಡಿಗಳ ಮೇಲೆ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4