ಹೋಳಿ ಹಬ್ಬದ ಸಲುವಾಗಿ ಬಣ್ಣ ಹಾಕಿಕೊಂಡು ನದಿಯಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಹೈದರಾಬಾದ್’ನ ಕುಮುರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವಾರ್ಧಾ ನದಿಯಲ್ಲಿ ನಡೆದಿದೆ.
ನಾಲ್ವರು ಯುವಕರ ತಂಡ ಹೋಳಿ ಸಂಭ್ರಮಾಚರಣೆ ಮುಗಿಸಿಕೊಂಡು ನದಿಯಲ್ಲಿ ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರಾದೃಷ್ಟವಶಾತ್ ಅವರಲ್ಲಿ ಯಾರಿಗೂ ಈಜು ಬಾರದ ಕಾರಣ ಒಬ್ಬರ ಹಿಂದೆ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಮುರಂ ಭೀಮ್ ಆಸಿಫಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಕೆ. ಸುರೇಶ್ ಕುಮಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಮೃತರು 22-25ರ ವಯೋಮಾನದವರು ಎನ್ನಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇವರೆಲ್ಲರೂ ಪಾನಮತ್ತರಾಗಿದ್ದರು ಎಂದು ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296