ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ನೆಲಮಂಗಲದ ಪುಷ್ಪ ಭೈರೇಗೌಡ ಕನ್ವೆನ್ಶನ್ ಹಾನಲ್ಲಿ ಆಗಸ್ಟ್ 8 ರಂದು ಬೆಳಿಗ್ಗೆ 10.30ಕ್ಕೆ ನಾಲ್ಕನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ವಾರ್ತಾ ಇಲಾಖೆಯ ಆಯುಕ್ತ ಎಂ. ಎನ್. ಅನುಚೇತ್ ಹಾಗೂ ಪ್ರಗತಿಪರ ರೈತ ಬಸವರಾಜು ಜಂಟಿಯಾಗಿ ಉದ್ಘಾಟಿಸುವರು. ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ. ಶಾಸಕ ಎನ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಮಂತ್ರಿ ಅವರ ಮಾಜಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಂಘಟನೆಯ ರಾಜ್ಯ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡುವರು.
ಸಂಘಟನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಚೌಡೇಗೌಡ ಆಶಯ ನುಡಿ ಆಡುವರು ಎಂದು ಜಿಲ್ಲೆಯವರೇ ಆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


