ಅಮೆಜಾನ್ ಇ-ಕಾಮರ್ಸ್ ಕಂಪನಿಗೆ ಗ್ರಾಹಕರ ಸೋಗಿನಲ್ಲಿ ವಂಚಿಸುತ್ತಿದ್ದ ಆರೋಪದಡಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಆರೋಪಿ, ತನ್ನದೇ ಸಹಪಾಠಿಗಳ ತಂಡ ಕಟ್ಟಿಕೊಂಡು ಕೃತ್ಯ ಎಸಗುತ್ತಿದ್ದ. ಕಂಪನಿ ವ್ಯವಸ್ಥಾಪಕ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. 7 20.34 ಲಕ್ಷ ಮೌಲ್ಯದ 16 ಮೊಬೈಲ್‌ಗಳು, ನಾಲ್ಕು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.


