ಆನ್ ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಸುತ್ತಿದ್ದ ವಿವಿಧ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿದ್ದ 5. 87 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಆನ್ ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಡಿಜಿಜಿಐ ಕಚೇರಿಗೆ ಬಂದ ದೂರಿನನ್ವಯ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


