ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಹಾಗೂ ಕೇಳಿದ ಸ್ಥಳಕ್ಕೆ ವರ್ಗಾವಣೆ ಮಾಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಮೋಹನ್ ಕುಮಾರ್(53) ಅವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನಿವಾಸಿ ಮೋಹನ್ ಕುಮಾರ್, ಹಲವರಿಂದ ಹಣ ಪಡೆದು ಮೋಜು- ಮಸ್ತಿಗೆಂದು ಬ್ಯಾಂಕಾಕ್ ಗೆ ಹೋಗಿದ್ದ. ಬೆಂಗಳೂರಿಗೆ ವಾಪಸು ಬರುತ್ತಿದ್ದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈತನನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


