ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ 150 ಯುವಕರಿಗೆ ಒಂದು ಕೋಟಿ ರೂ. ವಂಚಿಸಿರುವ ಅತಿದೊಡ್ಡ ಹಗರಣವನ್ನು ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಬಯಲಿಗೆಳಿದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವರಾಜ್ ವಟಗಲ್ ಮತ್ತು ಆತನ ಪತ್ನಿ ಭೀಮವ್ವ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬಂಧಿತರಿಂದ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿಗೆ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.


