ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಹೊಸ ದಿಕ್ಕು ಪಡೆದುಕೊಂಡಿದೆ.
ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿ ಸಿಗುವವರೆಗೆ ನಿರಂತರವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.
2ಡಿ ಮೀಸಲಾತಿ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದ್ದು, ಅದನ್ನು ತಿರಸ್ಕರಿಸಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ಸಲ ಕೊಟ್ಟ ಮಾತು ತಪ್ಪಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಕೈ ಸೇರಬೇಕು. ಸರ್ಕಾರ 2ಎ ಮೀಸಲಾತಿ ಘೋಷಿಸುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


