nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    ಚಿಕ್ಕನಾಯಕನಹಳ್ಳಿ June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    By adminJune 12, 2026No Comments2 Mins Read
    suresh babu

    ಚಿಕ್ಕನಾಯಕನಹಳ್ಳಿ: “ನಮ್ಮ ಕ್ಷೇತ್ರದ ಪ್ರತಿ ಮನೆಯಲ್ಲೂ ಒಬ್ಬೊಬ್ಬರು ಉತ್ತಮ ಉನ್ನತ ಸ್ಥಾನಕ್ಕೇರಬೇಕು ಎಂಬ ಉದಾತ್ತ ಉದ್ದೇಶದಿಂದ, ಸಮಾಜದ ಸಮಾನ ಮನಸ್ಕರೆಲ್ಲರೂ ಒಂದಾಗಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿಯನ್ನು ಆಯೋಜಿಸಲಾಗಿದೆ” ಎಂದು ಶಾಸಕ ಸಿ.ಬಿ. ಸುರೇಶ್‌ ಬಾಬು ತಿಳಿಸಿದರು.

    ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸಿಇಟಿ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಕ್ಷೇತ್ರದ ಗ್ರಾಮೀಣ ಮತ್ತು ನಗರ ಭಾಗದ ಮಕ್ಕಳ ಭವಿಷ್ಯಕ್ಕಾಗಿ ಈ ‘ಜ್ಞಾನಕಲ್ಪ’ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಟ್ರಸ್ಟ್‌ನ ಉಚಿತ ತರಬೇತಿಯ ಫಲವಾಗಿ ಈ ಬಾರಿ ಸರ್ಕಾರಿ ಕೋಟಾದಡಿ ಇನ್ನು ಹೆಚ್ಚಿನ ವಿದ್ಯಾರ್ಥಿಗಳು ಸೀಟು ಪಡೆಯಲಿದ್ದಾರೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು. ಸಾಧನೆಯ ವಿವರಗಳು ಹೀಗಿವೆ:

    ಒಟ್ಟು ತರಬೇತಿ ಪಡೆದ 313 ವಿದ್ಯಾರ್ಥಿಗಳಲ್ಲಿ ಎಂಜಿನಿಯರಿಂಗ್‌ಗೆ 49, ಬಿ.ಎಸ್ಸಿ ನರ್ಸಿಂಗ್‌ಗೆ 29, ಬಿ.ಎಸ್ಸಿ ಅಗ್ರಿಕಲ್ಚರ್‌ಗೆ 3, ಬಿ.ಫಾರ್ಮಸಿಗೆ 7, ಬಿ.ಎಸ್ಸಿ ಅನಸ್ತೇಷಿಯಾಗೆ 2 ಹಾಗೂ ಬಿ.ಎಸ್ಸಿ ಎಎಸ್‌ಎಸ್‌ಗೆ ಒಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.

    ಈ ಬಾರಿ ತರಬೇತಿ ಪಡೆದ ಒಟ್ಟು 421 ವಿದ್ಯಾರ್ಥಿಗಳಲ್ಲಿ 75 ಜನ ವಿದ್ಯಾರ್ಥಿಗಳು ಎಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ರ‍್ಯಾಂಕಿಂಗ್ ಪಡೆದಿದ್ದಾರೆ. ಇದರಲ್ಲಿ 21 ವಿದ್ಯಾರ್ಥಿಗಳು 50 ಸಾವಿರದೊಳಗಿನ ರ‍್ಯಾಂಕ್ ಗಳಿಸಿದ್ದಾರೆ. ಇನ್ನು ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ (Agriculture Practical) 15 ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಪಡೆದಿದ್ದಾರೆ.

    ಅದೇ ರೀತಿ ಈ ಬಾರಿಯೂ ನರ್ಸಿಂಗ್, ಅನಸ್ತೇಷಿಯಾ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್‌ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಯ್ಕೆಯಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

    “ನಮ್ಮ ತಂಡವು ಯಾವುದೇ ಸ್ವಾರ್ಥವಿಲ್ಲದೆ ಈ ಉಚಿತ ತರಬೇತಿಯನ್ನು ನೀಡುತ್ತಿದೆ. ಕಳೆದ ವರ್ಷದಿಂದ ಪ್ರಥಮ ಪಿಯುಸಿಯಿಂದಲೇ ತರಬೇತಿ ನೀಡುತ್ತಿರುವುದರಿಂದ, ಈ ಬಾರಿ ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಮತ್ತಷ್ಟು ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲಿದ್ದಾರೆ.”

    — ಸಿ.ಬಿ. ಸುರೇಶ್ ಬಾಬು, ಶಾಸಕರು

    ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ:

    ಕೇವಲ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಬಿ.ಕಾಂ ಮತ್ತು ಬಿ.ಎ ಪದವಿ ವಿದ್ಯಾರ್ಥಿಗಳಿಗೂ ಟ್ರಸ್ಟ್ ವತಿಯಿಂದ ನೆರವು ನೀಡಲಾಗುವುದು. ಮುಂದಿನ ದಿನಗಳಲ್ಲಿ ಎಸ್‌ಡಿಎ (SDA), ಎಫ್‌ಡಿಎ (FDA), ಕೆಎಎಸ್ (KAS) ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ನಮ್ಮ ಟ್ರಸ್ಟ್‌ನಿಂದ ಉಚಿತವಾಗಿ ತರಬೇತಿ ನೀಡಲಾಗುವುದು ಎಂದು ಶಾಸಕರು ಇದೇ ವೇಳೆ ಪ್ರಕಟಿಸಿದರು.

    ಈ ಪತ್ರಿಕಾಗೋಷ್ಠಿಯಲ್ಲಿ ಉಚಿತ ಸಿಇಟಿ ನೀಟ್ ತರಬೇತಿ ಸಮಿತಿಯ ಅಧ್ಯಕ್ಷ ನಾಗರಾಜು, ಸದಸ್ಯರುಗಳಾದ ಸೋಮಶೇಖರ್, ಜಾಕೀರ್, ಎಂ.ಎಸ್. ರವಿಕುಮಾರ್, ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.