nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.28ರಂದು ರಂಗಾಪುರದ ಶ್ರೀ ಆಂಜನೇಯಸ್ವಾಮಿ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ | ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಅತಿಥಿ

    November 24, 2026

    ಕೆಸಿಆರ್‌ ಗೆ ರಾಜಕೀಯ ಶಕ್ತಿ ತುಂಬಲು ಕುಂಚಶ್ರೀಗಳು ದಾರಿ ತೋರಲಿ:  ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    November 24, 2026

    ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು

    November 24, 2026
    Facebook Twitter Instagram
    ಟ್ರೆಂಡಿಂಗ್
    • ನ.28ರಂದು ರಂಗಾಪುರದ ಶ್ರೀ ಆಂಜನೇಯಸ್ವಾಮಿ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ | ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಅತಿಥಿ
    • ಕೆಸಿಆರ್‌ ಗೆ ರಾಜಕೀಯ ಶಕ್ತಿ ತುಂಬಲು ಕುಂಚಶ್ರೀಗಳು ದಾರಿ ತೋರಲಿ:  ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು
    • ಒಕ್ಕಲಿಗರ ಭವನಕ್ಕೆ ಶಂಕುಸ್ಥಾಪನೆ | ಒಕ್ಕಲಿಗ ನಾಯಕರ ಆಡಳಿತದಲ್ಲಿ ಸರ್ವಜನರ ಅಭಿವೃದ್ಧಿಗೆ ಆದ್ಯತೆ: ನಂಜಾವಧೂತ ಸ್ವಾಮೀಜಿ
    • ವಿಳಾಸದ ಗೊಂದಲಕ್ಕೆ ಶಾಶ್ವತ ಮುಕ್ತಿ | DIGIPIN ಕ್ರಾಂತಿ | ವಿಶೇಷ ಸಂಪಾದಕೀಯ
    • ತೊರೆಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ!
    • ಪೊಲೀಸ್ ಠಾಣೆಯಲ್ಲೇ ಯುವಕನ ಮೇಲೆ ಚಾಕು ಇರಿತ!
    • ಅನಗತ್ಯ ಸ್ಪ್ಯಾಮ್ ಕರೆ, ಮೆಸೇಜ್‌ ಗಳಿಂದ ಬೇಸತ್ತಿದ್ದೀರಾ? ಇಲ್ಲಿದೆ ಪರಿಹಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು
    ಚಿಕ್ಕನಾಯಕನಹಳ್ಳಿ November 24, 2026

    ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು

    By Ganesh TumkuruNovember 24, 2026No Comments2 Mins Read
    suresh babu

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆ ತೊರೆದು ವಿಶಾಲ ದೃಷ್ಟಿಕೋನ ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಕುಟುಂಬ, ಗ್ರಾಮ ಹಾಗೂ ತಾಲ್ಲೂಕಿಗೆ ಕೀರ್ತಿ ತರುವ ಮೂಲಕ ಸಮಾಜ ಸೇವೆಯ ಗುಣ ಬೆಳೆಸಿಕೊಳ್ಳಬೇಕು. ಯಾವುದೇ ಕೆಲಸವನ್ನು ಕೀಳಾಗಿ ಕಾಣದೆ ಗೌರವದಿಂದ ನಿರ್ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.

    ಪಟ್ಟಣದ ತೀನಂಶ್ರೀ ಭವನದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಜ್ಞಾನಕಲ್ಪ ಉಚಿತ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದು ಉತ್ತಮ ಅಂಕಗಳೊಂದಿಗೆ ಸರ್ಕಾರಿ ಕೋಟಾದಡಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸಿಇಟಿ ತರಬೇತಿಯ ಮೂಲಕ ಒಟ್ಟು 160 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಸರ್ಕಾರಿ ಕೋಟಾದಡಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಇಚ್ಛೆಯಂತೆ 138 ಮಂದಿಗೆ ಲ್ಯಾಪ್‌ ಟಾಪ್, ನಾಲ್ವರಿಗೆ ಶೈಕ್ಷಣಿಕ ಶುಲ್ಕ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

    ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಉತ್ತಮ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸುವ ಕಾರ್ಯವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಸಹಾಯಕ ಪ್ರಾಧ್ಯಾಪಕಿ ಪ್ರೊ. ದಿವ್ಯಮೂರ್ತಿ ಮಾತನಾಡಿ, ಕಳೆದ 14 ವರ್ಷಗಳಿಂದ ಉಚಿತ ತರಬೇತಿ ನೀಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಶಾಸಕರ ಕಾರ್ಯ ಶ್ಲಾಘನೀಯ. ರ‍್ಯಾಂಕ್ ಟು ರೈಟ್ ಚಾಯ್ಸ್ ಕಾರ್ಯಕ್ರಮದ ಮೂಲಕ ಸುಮಾರು 250 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿಗೆ ಉತ್ತಮ ದಾರಿ ಕಂಡುಕೊಂಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಬೆಳೆಸಿಕೊಂಡು ಸಾಧನೆ ಮಾಡಬೇಕು ಎಂದರು.

    ಸಂಪನ್ಮೂಲ ವ್ಯಕ್ತಿ ಪ್ರೊ. ಕೃಷ್ಣಚೈತನ್ಯ ಮಾತನಾಡಿ, ಗುಣಮಟ್ಟದ ತರಬೇತಿ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ದೊರೆತ ಅವಕಾಶವನ್ನು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು ಎಂದರು.

    ಕೆಂಕೆರೆಯ ಕೆಪಿಎಸ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಜಿ. ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತ ಊಟ, ವಸತಿ ಹಾಗೂ ಮೂಲಸೌಕರ್ಯಗಳೊಂದಿಗೆ ಗುಣಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ಸಿಇಟಿ ತರಬೇತಿ ನೀಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ತರಬೇತಿ ಪಡೆದು ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ವೈದಿಕಾ, ಮನೋಜ್, ಯೋಗಶ್ರೀ ಹಾಗೂ ಲಕ್ಷ್ಮೀಕಾಂತ್ ತಮ್ಮ ಅನುಭವ ಹಂಚಿಕೊಂಡು, ಈ ತರಬೇತಿಯಿಂದ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ ಎಂದರು.

    ಸಿಇಟಿ ತರಬೇತಿ ಸಮಿತಿ ಅಧ್ಯಕ್ಷ ನಾಗರಾಜು ಮಾತನಾಡಿ, 2025 ರಲ್ಲಿ 383 ಹಾಗೂ 2026ರಲ್ಲಿ 493 ವಿದ್ಯಾರ್ಥಿಗಳು ಜ್ಞಾನಕಲ್ಪ ಉಚಿತ ಸಿಇಟಿ, ನೀಟ್ ಮತ್ತು ಜೆಇಇ ತರಬೇತಿ ಪಡೆದಿದ್ದಾರೆ. ಉತ್ತಮ ಅಂಕಗಳೊಂದಿಗೆ ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಅವರ ಬೇಡಿಕೆಯಂತೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಕೋಡಿಹಳ್ಳಿ ರಮೇಶ್, ಕಂದಿಕೆರೆ ವಿಜಯಲಕ್ಷ್ಮಿ, ನಿಕಟಪೂರ್ವ ಅಧ್ಯಕ್ಷ ಸಾ.ಚಿ. ನಾಗೇಶ್ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಬಿಇಒ ಕಾಂತರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್‌ ಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಎಸ್. ರವಿಕುಮಾರ್, ಮಾಜಿ ಪುರಸಭಾ ಅಧ್ಯಕ್ಷ ಎಂ.ಎನ್. ಸುರೇಶ್, ನಿವೃತ್ತ ತಹಶೀಲ್ದಾರ್ ಲಕ್ಷ್ಮಣಪ್ಪ, ಮಾಜಿ ಪುರಸಭಾ ಉಪಾಧ್ಯಕ್ಷ ರಾಜಶೇಖರ್ ಸೇರಿದಂತೆ ಟ್ರಸ್ಟ್ ಹಾಗೂ ಉಚಿತ ಸಿಇಟಿ ತರಬೇತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಜನರ ಅರ್ಜಿಗಳಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಿ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 22, 2026

    ಅಲೆಮಾರಿ ಬುಡಕಟ್ಟು ಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 21, 2026

    ರಂಜಾನ್ ಹಾಗೂ ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆಯಲ್ಲಿ ದಿನಾಂಕ ಬದಲಾವಣೆ : ಶಾಸಕ ಸಿ.ಬಿ.ಸುರೇಶ್‌ ಬಾಬು

    November 19, 2026

    Leave A Reply Cancel Reply

    Our Picks

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026

    ಮದುವೆ ಸೀಸನ್‌ ನಿಂದ ವ್ಯಾಪಾರಿಗಳಿಗೆ ಶುಕ್ರದೆಸೆ; ದೇಶಾದ್ಯಂತ 52 ಲಕ್ಷ ಮದುವೆಗಳ ನಿರೀಕ್ಷೆ: ಇಲ್ಲಿದೆ ಲೆಕ್ಕಾಚಾರ 

    November 23, 2026

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನ.28ರಂದು ರಂಗಾಪುರದ ಶ್ರೀ ಆಂಜನೇಯಸ್ವಾಮಿ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ | ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಅತಿಥಿ

    November 24, 2026

    ತಿಪಟೂರು: ತಾಲ್ಲೂಕಿನ ರಂಗಾಪುರ–ಹೊಸಹಳ್ಳಿ ಸಮೀಪದ ರಾಯರ ತೋಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ಅದ್ಧೂರಿ ಕಾರ್ತೀಕ ದೀಪೋತ್ಸವ ಮಹೋತ್ಸವ…

    ಕೆಸಿಆರ್‌ ಗೆ ರಾಜಕೀಯ ಶಕ್ತಿ ತುಂಬಲು ಕುಂಚಶ್ರೀಗಳು ದಾರಿ ತೋರಲಿ:  ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    November 24, 2026

    ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು

    November 24, 2026

    ಒಕ್ಕಲಿಗರ ಭವನಕ್ಕೆ ಶಂಕುಸ್ಥಾಪನೆ | ಒಕ್ಕಲಿಗ ನಾಯಕರ ಆಡಳಿತದಲ್ಲಿ ಸರ್ವಜನರ ಅಭಿವೃದ್ಧಿಗೆ ಆದ್ಯತೆ: ನಂಜಾವಧೂತ ಸ್ವಾಮೀಜಿ

    November 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.