ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಕೊರಟಗೆರೆ, ಗುಬ್ಬಿ, ಶಿರಾ ಹಾಗೂ ಮಧುಗಿರಿ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗಾಗಿ ಜನವರಿ 30 ರಿಂದ ಫೆಬ್ರವರಿ 4ರವರೆಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜನವರಿ 30ರಂದು ಕೊರಟಗೆರೆ ತಾಲ್ಲೂಕು ಎಲೆರಾಂಪುರ ಶ್ರೀ ನರಸಿಂಹಗಿರಿ ಸುಕ್ಷೇತ್ರದ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠ, ಜನವರಿ 31ರಂದು ಗುಬ್ಬಿ ತಾಲ್ಲೂಕು ತ್ಯಾಗಟೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9:30 ಗಂಟೆಯಿಂದ ಹಾಗೂ ಫೆಬ್ರವರಿ 3ರಂದು ಶಿರಾ ತಾಲ್ಲೂಕು ತಾವರೆಕೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಫೆಬ್ರವರಿ 4ರಂದು ಮಧುಗಿರಿ ತಾಲ್ಲೂಕು ಮಿಡಿಗೇಶಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ.
ಹಿರಿಯ ನಾಗರಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4