ತುಮಕೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಮಹಿಳೆಯರಿಗಾಗಿ 30 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಯು ಡಿಸೆಂಬರ್ 10 ರಿಂದ ಆರಂಭವಾಗಲಿದ್ದು, ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡ ಓದಲು/ಬರೆಯಲು ಬರುವಂತಹ ಹಾಗೂ 18 ರಿಂದ 45 ವರ್ಷ ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380162042, 9241482541ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx