ಶ್ರವಣೂರು: ಇನ್ಮುಂದೆ ಪ್ರತಿ ಮನೆ ಮನೆ ಬಾಗಿಲಿಗೆ ಆರೋಗ್ಯ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಶ್ರವಣೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ರವರು ತಿಳಿಸಿದರು.
ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದ ರಂಗಸ್ಥಳ ಆವರಣದಲ್ಲಿ ವಿಶ್ವ ರತ್ನ ಡಾ.ಅಂಬೇಡ್ಕರ್ ದಲಿತ ಕ್ಷೇಮಾಭಿವೃದ್ಧಿ ಸಂಘ ಹಾಗೂ ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವು ಯುವ ಮುಖಂಡ ಶ್ರೀಧರ್ ಸತೀಶ್ ಅಧ್ಯಕ್ಷತೆಯಲ್ಲಿ, ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿಯಾದ ವೀರಭದ್ರಯ್ಯ ಮತ್ತು ಗಣ್ಯರಿಂದ ದೀಪ ಹಚ್ಚುವ ಮೂಲಕ ಉದ್ಘಾಟನೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಸುತ್ತ ಮುತ್ತ ಹಳ್ಳಿಯ ಆಶಾ ಕಾರ್ಯಕರ್ತೆಯರು ಲೋಕೇಶ್ ಎಮ್.ಎನ್.ಶಿವರಾಜ್.ಜಿ.ಡಿ. ಡಾ.ಯಶ್ವಂತ್.NCD ಕೌನ್ಸಿಲರ್ ಎಸ್. ಕಮಲೇಶ್.ಪ್ರಕಾಶ್. ರವರು ಹಾಗೂ ಅಂಬೇಡ್ಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು


