ತಿಪಟೂರು: ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಪರವಗೊಂಡನಹಳ್ಳಿ ಜಾನಕಿ ರಾಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ 40 ಮಂದಿ ಮಹಿಳಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಬಿ.ಪಿ, ಶುಗರ್, ಹಾಗೂ ಆರೋಗ್ಯ ತಪಾಸಣೆ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಅರವಿಂದ ಆಯುರ್ವೇದದ ಅನುಭವಿ ವೈದ್ಯರ ತಂಡ ಭಾಗಿಯಾಗಿದ್ದರು. ಮಹಿಳೆಯರ ಆರೋಗ್ಯ ಸಂಬಂಧಿ ಕಾಯಿಲೆಗಳು ಹಾಗೂ ವೈದ್ಯಕೀಯ ಸಲಹೆ ಸೂಚನೆಗಳನ್ನು ಸಹ ನೀಡಲಾಗಿತ್ತು.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖ್ಯಾತ ಆಯುರ್ವೇದ ತಜ್ಞರಾದ ಡಾ.ಪ್ರಶಾಂತ್ ನೈಸರ್ಗಿಕ ಆಯುರ್ವೇದ ಚಿಕಿತ್ಸೆ ಮೂಲಕ ಸಂಪೂರ್ಣ ಸ್ವಾಸ್ಥ್ಯವನ್ನು ಪಡೆದುಕೊಳ್ಳಬಹುದು, ಮಹಿಳೆಯರಿಗೆ ದೀರ್ಘ ಕಾಲದಿಂದಲೂ ಕಾಡುವ ಸಮಸ್ಯೆಗಳನ್ನು ಸಹ ಪರಿಣಾಮಕಾರಿಯಾಗಿ ಆಪ್ತ ಸಮಾಲೋಚನೆಗಳು, ವೈಯಕ್ತಿಕ ಚಿಕಿತ್ಸಾ ವಿಧಾನಗಳ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ನುಡಿದರು.
ಅರವಿಂದ ಆಯುರ್ವೇದದಲ್ಲಿ ಇರುವಂತಹ ಶಾಸ್ತ್ರೀಯ ಆಯುರ್ವೇದ ಮಾದರಿಯ ಚಿಕಿತ್ಸಾ ವಿಧಾನಗಳು ಬಹಳ ಪರಿಣಾಮಕಾರಿಯಾಗಿರುತ್ತವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA