nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಫಲ ಪುಷ್ಪ ಪ್ರದರ್ಶನಗಳು ಪ್ರೇರಣೆ: ಜಿ.ಪ್ರಭು
    ತುಮಕೂರು January 24, 2025

    ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಫಲ ಪುಷ್ಪ ಪ್ರದರ್ಶನಗಳು ಪ್ರೇರಣೆ: ಜಿ.ಪ್ರಭು

    By adminJanuary 24, 2025No Comments2 Mins Read
    g prabhu

    ತುಮಕೂರು:  ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಜ್ಞಾನ ಮೂಡಿಸುವಂತಹ ಫಲ–ಪುಷ್ಪ ಪ್ರದರ್ಶನವನ್ನು ಈ ಬಾರಿ ವಿಶೇಷವಾಗಿ ಏರ್ಪಡಿಸಲಾಗಿದೆ. ಆಕರ್ಷಕ ವಿನ್ಯಾಸದ ಫಲ-ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

    ಇಂದು ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ‘ಫಲಪುಷ್ಪ ಪ್ರದರ್ಶನ 2024–25’ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಫಲ–ಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26 ರಿಂದ 28 ರವರೆಗೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

    ಫಲಪುಷ್ಪ ಪ್ರದರ್ಶನದಲ್ಲಿ ಮಂಧರಗಿರಿ ಮರು ಸೃಷ್ಠಿ, ಸಿರಿಧಾನ್ಯ ಕಲಾಕೃತಿ, ತರಕಾರಿ ಕೆತ್ತನೆಯಲ್ಲಿ ಇಸ್ರೋಗೆ ನಮನ, ಜಾನುರ್ ಕಲೆಯಲ್ಲಿ ಹೊಮ್ಮುವ ರೈತ ಜೀವನ, ಮರಳು ಕಲಾಕೃತಿ, ಆಕರ್ಷಕ ವಿನ್ಯಾಸದ ಪುಷ್ಪ ಪ್ರದರ್ಶನ ವಿಶೇಷ ಆಕರ್ಷಣೆಯಾಗಿವೆ ಎಂದು ತಿಳಿಸಿದರು.

    ಕೃಷಿ ಇಲಾಖೆಯಿಂದ ಪಾರಂಪರಿಕ ಹಾಗೂ ಆಧುನಿಕ ಕೃಷಿ ಸಲಕರಣೆಗಳು ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಮೀನುಗಾರಿಕೆ ಇಲಾಖೆಯಿಂದ ಆಕರ್ಷಕ ಅಕ್ವೇರಿಯಂ ಪ್ರದರ್ಶನ, ಪಶು ಸಂಗೋಪನೆ ಇಲಾಖೆಯಿಂದ ದೇಶಿ ತಳಿಗಳ ಪರಿಚಯ, ರೇಷ್ಮೆ ಇಲಾಖೆಯಿಂದ ರೇಷ್ಮೆ ಗೂಡಿನ ಕರಕುಶಲ ವಸ್ತುಗಳ ಪ್ರದರ್ಶನ, ಅರಣ್ಯ ಇಲಾಖೆಯಿಂದ ವನ್ಯ ಜಗತ್ತು ಪರಿಚಯ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದರಿ ಪ್ರದರ್ಶನ, ಸಾಮಾಜಿಕ ಅಭಿವೃದ್ಧಿಯಿಂದ ವಸತಿ ಶಿಕ್ಷಣ ಸಮುಚ್ಛಯ, ಗಂಗಾ ಕಲ್ಯಾಣ ಯೋಜನೆಗಳ ಅನಾವರಣ, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನಮ್ಮೂರ ರೇಷ್ಮೆ, ಗ್ರಂಥಾಲಯದಿಂದ ಜ್ಞಾನ ಭಂಡಾರ, ಪ್ರವಾಸೋದ್ಯಮ ಇಲಾಖೆಯಿಮದ ಪ್ರವಾಸಿ ತಾಣಗಳ ಛಾಯಚಿತ್ರ ಪ್ರದರ್ಶನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಸೇವೆಗಳ ಪರಿಚಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಮ್ಮೂರ ಅಂಗನವಾಡಿ ಮಾದರಿ, ಶಿಕ್ಷಣ ಇಲಾಖೆಯಿಂದ ವಿಜ್ಞಾನ ಲೋಕ, ಬೆಸ್ಕಾಂ ವತಿಯಿಂದ ಗೃಹ ಜ್ಯೋತಿ ಮಾದರಿ ಪ್ರದರ್ಶನ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಂದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

    ಫಲಪುಷ್ಪ ಪ್ರದರ್ಶನ ಅಂಗವಾಗಿ ಉದ್ಯಾನವನ ಮಾಡಲ್ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಸಹ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಶೇಷ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನ ನೋಡಲು ಬರುವ ಎಲ್ಲರಿಗೂ ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯ ನಂತರ ಅಧಿಕಾರಿಗಳೊಂದಿಗೆ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಿ.ಸಿ. ಶಾರದಮ್ಮ, ತೋಟಗಾರಿಕೆ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.